ಧರ್ಮೋಪದೇಶಕಾಂಡ 16:3 - ಕನ್ನಡ ಸತ್ಯವೇದವು C.L. Bible (BSI)3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |