ಧರ್ಮೋಪದೇಶಕಾಂಡ 16:4 - ಕನ್ನಡ ಸತ್ಯವೇದವು C.L. Bible (BSI)4 ಆ ಏಳು ದಿವಸವೂ ನಿಮ್ಮ ನಾಡಿನಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿ ಇರಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಏಳು ದಿವಸವೂ ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆದ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಏಳು ದಿನಗಳ ತನಕ ಇಡೀ ದೇಶದಲ್ಲಿ ಯಾರ ಮನೆಯಲ್ಲಿಯಾದರೂ ರೊಟ್ಟಿಗೆ ಬೆರೆಸುವ ಹುಳಿಯು ಇರಬಾರದು. ಮತ್ತು ಮೊದಲನೇ ದಿನದ ಸಾಯಂಕಾಲ ನೀವು ವಧಿಸುವ ಪ್ರಾಣಿಯ ಮಾಂಸವನ್ನು ಮುಂಜಾನೆಯೊಳಗೆ ತಿಂದು ಮುಗಿಸತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿಮ್ಮ ಮೇರೆಗಳಲ್ಲಿ ಎಲ್ಲಿಯೂ ಕಾಣಬಾರದು. ಮೊದಲನೆಯ ದಿವಸದ ಸಾಯಂಕಾಲದಲ್ಲಿ ನೀವು ಯಜ್ಞವಾಗಿ ಸಮರ್ಪಿಸಿದ ಮಾಂಸದಲ್ಲಿ ಏನೂ ಮರುದಿವಸದವರೆಗೆ ಉಳಿಯಬಾರದು. ಅಧ್ಯಾಯವನ್ನು ನೋಡಿ |