Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:11 - ಕನ್ನಡ ಸತ್ಯವೇದವು C.L. Bible (BSI)

11 ಅವರು ಕೊಡುವ ಆದೇಶದ ಪ್ರಕಾರ ಹಾಗು ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಬಲಕ್ಕೆ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಬೋಧಿಸುವ ಬೋಧನೆಯಂತೆಯೂ ಅವರು ಹೇಳಿಕೊಡುವ ತೀರ್ಪಿನಂತೆಯೂ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಬಲಕ್ಕೆ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:11
16 ತಿಳಿವುಗಳ ಹೋಲಿಕೆ  

ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.


ತಿರುಗಬೇಡ ಎಡಕ್ಕಾಗಲಿ, ಬಲಕ್ಕಾಗಲಿ; ಕೇಡಿನಿಂದ ನಿನ್ನ ಕಾಲು ದೂರವಿರಲಿ.


ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು.


ಮೋಶೆಯ ಧರ್ಮಶಾಸ್ತ್ರವನ್ನೂ ಎಲ್ಲಾ ವಿಧಿಗಳನ್ನೂ ಕೈಗೊಳ್ಳುವುದರಲ್ಲಿ ಸ್ಥಿರಚಿತ್ತದಿಂದಿರಿ. ಎಡಕ್ಕಾಗಲಿ ಬಲಕ್ಕಾಗಲಿ ಓರೆಯಾಗಬೇಡಿ.


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.


ಸರ್ವೇಶ್ವರ ಆರಿಸಿಕೊಂಡ ಆ ಸ್ಥಳದಲ್ಲಿ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು