ಧರ್ಮೋಪದೇಶಕಾಂಡ 17:12 - ಕನ್ನಡ ಸತ್ಯವೇದವು C.L. Bible (BSI)
12 ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.
12 ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
12 ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.
12 “ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.
12 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.
ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.
ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.
ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಕುಲಗಳಲ್ಲಿ ಲೇವಿಯನನ್ನು, ಇವನ ತರುವಾಯ ಇವನ ಸಂತತಿಯವರನ್ನು, ತಮ್ಮ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವುದಕ್ಕೆ ತಾವೇ ನೇಮಿಸಿಕೊಂಡು ಇದ್ದಾರಲ್ಲವೆ?
“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.
ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.
ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.
ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.
ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.
“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.