Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:17 - ಕನ್ನಡ ಸತ್ಯವೇದವು C.L. Bible (BSI)

17 ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವದಕ್ಕೆ ಅವಕಾಶವಾಗುವದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:17
22 ತಿಳಿವುಗಳ ಹೋಲಿಕೆ  

“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.


‘ಈ ಕಾರಣದಿಂದಲೇ ಗಂಡನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎಂದೂ ಹೇಳಿದ್ದಾರೆಂಬುದಾಗಿ ನೀವು ಪವಿತ್ರ‍ ಗ್ರಂಥದಲ್ಲಿ ಓದಿಲ್ಲವೇ?


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ಹೆಬ್ರೋನಿನಿಂದ ಜೆರುಸಲೇಮಿಗೆ ಬಂದ ಮೇಲೆ ದಾವೀದನು ಹೆಚ್ಚುಮಂದಿ ಸ್ತ್ರೀಯರನ್ನು ಪತ್ನಿಯರನ್ನಾಗಿ ಹಾಗು ಉಪಪತ್ನಿಯರನ್ನಾಗಿ ಮಾಡಿಕೊಂಡನು. ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣು ಮಕ್ಕಳು ಹುಟ್ಟಿದರು.


ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು.


ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.


ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು.


ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತ ಎಂಟು ಮಂದಿ ಗಂಡುಮಕ್ಕಳೂ ಅರವತ್ತು ಮಂದಿ ಹೆಣ್ಣು ಮಕ್ಕಳೂ ಹುಟ್ಟಿದರು.


ನಿನ್ನ ಪೌರುಷತ್ವವನ್ನೆಲ್ಲಾ ಸ್ತ್ರೀಯರಿಗೆ ಒಪ್ಪಿಸದಿರು; ಅರಸನನ್ನೆ ನಾಶಮಾಡಬಲ್ಲ ಅವರಿಗಾಗಿ ಹಣವನ್ನೆಲ್ಲ ವ್ಯಯಮಾಡದಿರು.


ಜೆರುಸಲೇಮಿನಲ್ಲೂ ದಾವೀದನು ಹಲವು ಮಹಿಳೆಯರನ್ನು ವಿವಾಹವಾಗಿ ಇನ್ನೂ ಕೆಲವು ಮಂದಿ ಗಂಡು ಮಕ್ಕಳನ್ನೂ ಹೆಣ್ಣು ಮಕ್ಕಳನ್ನೂ ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು