Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:18 - ಕನ್ನಡ ಸತ್ಯವೇದವು C.L. Bible (BSI)

18 “ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:18
7 ತಿಳಿವುಗಳ ಹೋಲಿಕೆ  

ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿದೆ,” ಎಂದು ಹೇಳಿ ಅದನ್ನು ಅವನ ಕೈಗೆ ಕೊಟ್ಟನು.


ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.


ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು