Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:2 - ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಊರುಗಳೊಂದರಲ್ಲಿ ಒಬ್ಬ ಪುರುಷ ಅಥವಾ ಸ್ತ್ರೀ ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನೆಯನ್ನು ಮೀರಿದ್ದಾರೆ ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಒಂದು ಪಟ್ಟಣದಲ್ಲಿ ನೀವು ಕೆಟ್ಟ ಸುದ್ದಿಯೊಂದನ್ನು ಅಂದರೆ ಒಬ್ಬ ಸ್ತ್ರೀಯಾಗಲಿ ಅಥವಾ ಪುರುಷನಾಗಲಿ ದೇವರೊಂದಿಗೆ ಮಾಡಿದ ಒಡಂಬಡಿಕೆಯನ್ನು ಮುರಿದು ಆತನಿಗೆ ವಿರುದ್ಧವಾಗಿ ಪಾಪಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:2
26 ತಿಳಿವುಗಳ ಹೋಲಿಕೆ  

“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.


ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.


ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”


ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.


ಆ ಪುರುಷನನ್ನು ಅಥವಾ ಆ ಸ್ತ್ರೀಯನ್ನು ಹಿಡಿದು, ಊರ ಹೊರಗೆ ತಂದು, ಕಲ್ಲುಬೀರಿ ಕೊಲ್ಲಬೇಕು.


ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.


ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.


“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ


ಮೋಶೆಯ ಆಜ್ಞಾವಿಧಿಗಳನ್ನು ಉಲ್ಲಂಘಿಸಿದವನು, ಇಬ್ಬರು ಅಥವಾ ಮೂವರು ಸಾಕ್ಷಿಗಳು ನೀಡುವ ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆಗೆ ಗುರಿ ಆಗುತ್ತಾನೆ.


“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


ಇದು ಕೂಡ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು ಮೇಲಣ ಲೋಕದ ದೇವರಿಗೆ ದ್ರೋಹವೆಸಗಿದಂತಾಗುತ್ತಿತ್ತು.


ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಒಡಂಬಡಿಕೆಯನ್ನು ಮೀರಿದವರಿಗೆ ಇಬ್ಭಾಗವಾಗಿ ಸೀಳಿದ ಕರುವಿನ ಗತಿ ಬರುವಂತೆ ಮಾಡುವೆನು.


“ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.


ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಯೋವಾಷನು ತನಗೆ ವಿರುದ್ಧವಾಗಿ ನಿಂತವರೆಲ್ಲರಿಗೆ, “ಬಾಳನ ಪರ ನೀವು ವ್ಯಾಜ್ಯಮಾಡಬೇಕೆ? ನೀವು ಅವನನ್ನು ರಕ್ಷಿಸಬೇಕೇ? ಅವನಿಗಾಗಿ ವ್ಯಾಜ್ಯಮಾಡುವವರು ಬೆಳಗಾಗುವಷ್ಟರಲ್ಲಿ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು