Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:1 - ಕನ್ನಡ ಸತ್ಯವೇದವು C.L. Bible (BSI)

1 “ಯಾಜಕಸೇವೆ ಮಾಡುವ ಲೇವಿಯರಿಗೆ ಹಾಗು ಲೇವಿಯಕುಲದ ಸರ್ವರಿಗೆ ಇತರ ಇಸ್ರಯೇಲರಂತೆ ಸ್ವಂತಕ್ಕಾಗಿ ಭೂಸ್ವತ್ತು ದೊರೆಯುವುದಿಲ್ಲ. ಸರ್ವೇಶ್ವರನಿಗೆ ಸಮರ್ಪಿತವಾದ ಬಲಿದ್ರವ್ಯಗಳು ಹಾಗು ಎಲ್ಲ ಮೀಸಲಾಗಿಟ್ಟವುಗಳೇ ಅವರಿಗೆ ಜೀವನಾಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಜಕಸೇವೆಮಾಡುವ ಲೇವಿಯರಿಗಾಗಲಿ ಲೇವಿಕುಲದವರಲ್ಲಿ ಯಾರಿಗೇಯಾಗಲಿ ಇತರ ಇಸ್ರಾಯೇಲ್ಯರೊಡನೆ ಸ್ವಂತಕ್ಕಾಗಿ ಭೂಸ್ಥಿತಿ ದೊರೆಯುವದಿಲ್ಲವಷ್ಟೆ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯಾಜಕರಾದ ಲೇವಿಯರಿಗೂ, ಆ ಎಲ್ಲಾ ಲೇವಿಯ ಗೋತ್ರಕ್ಕೂ, ಇಸ್ರಾಯೇಲಿನ ಸಂಗಡ ಪಾಲೂ ಸೊತ್ತೂ ಇರಬಾರದು. ಅವರು ಯೆಹೋವ ದೇವರಿಗೆ ಸಮರ್ಪಿಸಿದ ದಹನಬಲಿಯ ಕಾಣಿಕೆಗಳ ಮೇಲೆ ಆಧಾರಮಾಡಿಕೊಂಡು ಜೀವಿಸಬೇಕು. ಅದು ಅವರ ಬಾಧ್ಯತೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:1
12 ತಿಳಿವುಗಳ ಹೋಲಿಕೆ  

ಆದುದರಿಂದ ಮಿಕ್ಕ ಇಸ್ರಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ವಾಸ್ತ್ಯ ದೊರಕಲಿಲ್ಲ. ನಿಮ್ಮ ದೇವರಾದ ಸರ್ವೇಶ್ವರ ಅವರಿಗೆ ಹೇಳಿದಂತೆ ಸರ್ವೇಶ್ವರಸ್ವಾಮಿಯೇ ಅವರ ಸೊತ್ತು.


ಲೇವಿ ಕುಲದವರಿಗೆ ಮಾತ್ರ ಯಾವ ಪಾಲೂ ಸಿಕ್ಕಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನು ಆಜ್ಞಾಪಿಸಿದಂತೆ ಯಜ್ಞಶೇಷವೇ ಅವರ ಸೊತ್ತಾಗಿತ್ತು.


ನೀವು ನಿಮ್ಮ ನಾಡಿನಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಇದು ನೆನಪಿರಲಿ.


ಇದಲ್ಲದೆ ಸರ್ವೇಶ್ವರ ಆರೋನನಿಗೆ ಹೀಗೆಂದರು: “ಇಸ್ರಯೇಲರ ನಾಡಿನಲ್ಲಿ ನಿನ್ನ ಸ್ವಂತ ಸೊತ್ತಾಗಿ ಯಾವ ಆಸ್ತಿಯೂ ಇರುವುದಿಲ್ಲ; ಅವರೊಂದಿಗೆ ನಿನಗೆ ಯಾವ ಪಾಲೂ ಇರುವುದಿಲ್ಲ. ಇಸ್ರಯೇಲರ ನಡುವೆ ನಾನೇ ನಿನಗೆ ಆಸ್ತಿಪಾಸ್ತಿ, ಪಾಲುಪಸುಗೆ.”


ಆದರೆ ಲೇವಿಯ ಕುಲಕ್ಕೆ ಮೋಶೆ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನೇ ಅವರ ಸೊತ್ತೆಂದು ವಾಗ್ದಾನ ಮಾಡಲಾಗಿತ್ತು.


ಬೇರೆ ಇಸ್ರಯೇಲರಿಗೆ ಸೊತ್ತು ದೊರಕಿದಂತೆ ಲೇವಿಯರಿಗೆ ದೊರಕದೆ ಹೋದುದರಿಂದ ಅವರು ಇಸ್ರಯೇಲರ ಸಮೇತ ಎಣಿಕೆ ಆಗಲಿಲ್ಲ. ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನು ಲೆಕ್ಕ ಹಾಕಿದಾಗ ಅವರ ಸಂಖ್ಯೆ : 23,000 ಇತ್ತು.


ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


“ಯಾಜಕರಿಗೆ ಇರುವ ಒಂದು ಸೊತ್ತು ಎಂದರೆ ನಾನೇ. ಇಸ್ರಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು. ನಾನೇ ಅವರಿಗೆ ಆಸ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು