ಧರ್ಮೋಪದೇಶಕಾಂಡ 18:12 - ಕನ್ನಡ ಸತ್ಯವೇದವು C.L. Bible (BSI)12 ಇಂಥ ಕೆಲಸಗಳನ್ನು ನಡೆಸುವವರು ಸರ್ವೇಶ್ವರನಿಗೆ ಅಸಹ್ಯರಾಗಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ದೂರ ಹೊರದೂಡಿಸಿಬಿಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಂಥ ಕೆಲಸಗಳನ್ನು ನಡಿಸುವವರು ಯೆಹೋವನಿಗೆ ಅಸಹ್ಯರಾಗಿದ್ದಾರೆ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮೆದುರಿನಿಂದ ಹೊರಡಿಸಿಬಿಡುತ್ತಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಂಥ ಕಾರ್ಯಗಳನ್ನು ಮಾಡುವ ಜನರನ್ನು ದೇವರು ದ್ವೇಷಿಸುತ್ತಾನೆ. ಆದ್ದರಿಂದಲೇ ಆ ಜನಾಂಗಗಳವರನ್ನು ನಿಮಗೋಸ್ಕರವಾಗಿ ಈ ದೇಶದಿಂದ ಹೊರಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ. ಅಧ್ಯಾಯವನ್ನು ನೋಡಿ |