Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:4 - ಕನ್ನಡ ಸತ್ಯವೇದವು C.L. Bible (BSI)

4 ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ಯಾಜಕರಿಗೆ ನಿಮ್ಮ ಬೆಳೆಯ ಪ್ರಥಮ ಫಲವನ್ನು ಕೊಡಬೇಕು. ನಿಮ್ಮ ಧಾನ್ಯಗಳ ಪ್ರಥಮ ಫಲವನ್ನು, ದ್ರಾಕ್ಷಾರಸದಲ್ಲಿ, ಎಣ್ಣೆಯಲ್ಲಿ ಮತ್ತು ನಿಮ್ಮ ಉಣ್ಣೆಯಲ್ಲಿ ಪ್ರಥಮ ಫಲವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ಪ್ರಥಮ ಫಲವನ್ನೂ, ನಿಮ್ಮ ಕುರಿಗಳ ಉಣ್ಣೆಯಲ್ಲಿ ಪ್ರಥಮವಾದದ್ದನ್ನೂ ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:4
10 ತಿಳಿವುಗಳ ಹೋಲಿಕೆ  

ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.


ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು