Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:6 - ಕನ್ನಡ ಸತ್ಯವೇದವು C.L. Bible (BSI)

6 “ಇಸ್ರಯೇಲರ ಯಾವುದಾದರೊಂದು ಊರಲ್ಲಿ ಇಳಿದುಕೊಂಡಿದ್ದ ಒಬ್ಬ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರ ಯಾವದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಯೆಹೋವನು ಆದುಕೊಂಡ ಸ್ಥಳಕ್ಕೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಬ್ಬ ಲೇವಿಯು ಸಮಸ್ತ ಇಸ್ರಾಯೇಲಿನಲ್ಲಿರುವ ಯಾವುದೇ ಊರಿನಲ್ಲಿ ಇಳಿದುಕೊಂಡಿರುವ ಸ್ಥಳದಿಂದ ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:6
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ನಿನ್ನಿಂದ ಶಕ್ತಿಪಡೆಯುವವರು ಧನ್ಯರು I ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II


ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಸರ್ವೇಶ್ವರನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಬಹುದು;


“ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲೂ ಎರಡೆರಡು ಸಾವಿರ ಮೊಳಗಳಷ್ಟು ದೂರದಲ್ಲಿ ಎಲ್ಲೆಗಳನ್ನು ಗೊತ್ತುಮಾಡಬೇಕು. ಆ ಭೂಮಿಯ ನಡುವೆ ಊರಿರಬೇಕು. ಮಿಕ್ಕದ್ದು ಹುಲ್ಲುಗಾವಲಾಗಿರಬೇಕು.


ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು