Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:8 - ಕನ್ನಡ ಸತ್ಯವೇದವು C.L. Bible (BSI)

8 ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ವಿುಕ್ಕ ಲೇವಿಯರೊಂದಿಗೆ ಸಮವಾಗಿ ಭೋಗಿಸುವದಕ್ಕೆ ಬಾಧ್ಯನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಲೇವಿಯನು ಇತರ ಲೇವಿಯರೊಂದಿಗೆ ಸಮಾನ ಪಾಲನ್ನು ಹೊಂದುವನು. ಇದಲ್ಲದೆ ಅವನ ಕುಟುಂಬದವರು ಯಥಾಪ್ರಕಾರ ತಮಗೆ ಬರತಕ್ಕ ಪಾಲನ್ನೂ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದರಲ್ಲಿ ಹಣದ ಪಾಲನ್ನು ಸ್ವೀಕರಿಸಿದ್ದರೂ, ಮಿಕ್ಕ ಲೇವಿಯರೊಡನೆ ಸಮಾನ ಪಾಲು ಹೊಂದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:8
11 ತಿಳಿವುಗಳ ಹೋಲಿಕೆ  

ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.


ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.


ಯಾಜಕರು ಮತ್ತು ಲೇವಿಯರು ಸರ್ವೇಶ್ವರನ ಧರ್ಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು, ಜೆರುಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ಸಮರ್ಪಿಸುವ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಸರ್ವೇಶ್ವರನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಪೀಠಕ್ಕೆ ಬಲಿಪ್ರಾಣಿಯ ರಕ್ತವನ್ನು ಚಿಮುಕಿಸಿದ ಯಾಜಕನಿಗೆ ಸೇರಬೇಕು.


“ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು.


“ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ.


ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಸರ್ವೇಶ್ವರನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಬಹುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು