Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:9 - ಕನ್ನಡ ಸತ್ಯವೇದವು C.L. Bible (BSI)

9 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಹೇಸಿಗೆ ಕೆಲಸಗಳನ್ನು ಅನುಸರಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ಪದ್ದತಿಗಳನ್ನು ಅನುಸರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:9
11 ತಿಳಿವುಗಳ ಹೋಲಿಕೆ  

ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನೇ ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನು ಅನುಸರಿಸಿ ನಡೆಯಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಡಬಹುದು; ಮತ್ತು ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಬಹುದು.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ಅವರನ್ನು ರೇಗಿಸಿದರು;


ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


“ಅನ್ಯಜನಾಂಗಗಳ ಆಚರಣೆಯನ್ನು ಅನುಸರಿಸಬೇಡಿ ಅವರು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು