Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:10 - ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆಯಾದರೆ ಆ ದೋಷವು ನಿಮ್ಮದಾಗಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:10
16 ತಿಳಿವುಗಳ ಹೋಲಿಕೆ  

ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.


“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.


“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲು ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು