Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:4 - ಕನ್ನಡ ಸತ್ಯವೇದವು C.L. Bible (BSI)

4 “ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಪಟ್ಟಣಗಳ ಸಂಗತಿ ಹೇಗಂದರೆ - ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:4
12 ತಿಳಿವುಗಳ ಹೋಲಿಕೆ  

ಪೂರ್ವಕಲ್ಪಿತ ಯಾವ ದ್ವೇಷವೂ ಇಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ನಗರಗಳನ್ನು ನೇಮಿಸಿದನು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.


ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು.


ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.


ಇದಲ್ಲದೆ, ಯಕೋಬನ ಕಣ್ಣಿಗೆ ಲಾಬಾನನ ಮನೋಭಾವವು ಮೊದಲಿದ್ದಂತೆ ತೋರಲಿಲ್ಲ.


ಸರ್ವೇಶ್ವರ ಮೋಶೆಗೆ ಹೇಳಿದ್ದು ಇದು:


ಅಂಥವನು ಸಭೆಯವರಿಂದ ತೀರ್ಪುಹೊಂದುವುದಕ್ಕಿಂತ ಮೊದಲೇ ಹತನಾದವನ ಸಮೀಪ ಬಂಧುವಿನಿಂದ ಸಾಯದಂತೆ ಈ ಆಶ್ರಯಧಾಮಗಳು ನಿಮ್ಮಲ್ಲಿ ಇರಬೇಕು.


ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಯನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ನಾಡನ್ನು ಮೂರು ಭಾಗಮಾಡಬೇಕು.


ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನ‍ನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು