Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:5 - ಕನ್ನಡ ಸತ್ಯವೇದವು C.L. Bible (BSI)

5 ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೃಷ್ಟಾಂತ - ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:5
7 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


“ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.


ಅವರು ಜೋರ್ಡನನ್ನು ಮುಟ್ಟಿ ಮರಗಳನ್ನು ಕಡಿಯುತ್ತಿರುವಾಗ ಒಬ್ಬನ ಕೊಡಲಿ, ಕಾವು ತಪ್ಪಿ, ನೀರೊಳಗೆ ಬಿದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು