Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:4 - ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವದಕ್ಕಿದ್ದೀರಷ್ಟೆ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:4
15 ತಿಳಿವುಗಳ ಹೋಲಿಕೆ  

“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?


ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ಈ ಕಾರಣ ಏದೋಮನೆಂಬ ಏಸಾವನು ಸೇಯೀರ್ ಮಲೆನಾಡಿಗೆ ಹೋಗಿ ಅಲ್ಲೇ ವಾಸವಾಗಿದ್ದನು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


‘ನೀವು ಈ ಮಲೆನಾಡನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು