ಧರ್ಮೋಪದೇಶಕಾಂಡ 2:7 - ಕನ್ನಡ ಸತ್ಯವೇದವು C.L. Bible (BSI)7 “ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ. ಅಧ್ಯಾಯವನ್ನು ನೋಡಿ |