Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:8 - ಕನ್ನಡ ಸತ್ಯವೇದವು C.L. Bible (BSI)

8 “ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ಪ್ರಯಾಣಮಾಡಿ ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:8
9 ತಿಳಿವುಗಳ ಹೋಲಿಕೆ  

ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.


ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಸಿರಿಯಾ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ.


ಅನಂತರ ಅವರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ನದಿಯ ಆಚೆಯಲ್ಲಿ ಇಳಿದುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲು ಇಡಲಿಲ್ಲ.


ಅರಸನು ಮೃತನಾಗಿ ಪಿತೃಗಳ ಬಳಿ ಸೇರಿದ ಮೇಲೆ, ಇವನು ಏಲತ್ ಎಂಬ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿ, ಭದ್ರಪಡಿಸಿದನು.


ಜೋರ್ಡನ್ ನದಿಯ ಆಚೆ, ಪಾರಾನಿಗೂ, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳಿಗೂ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆ ಇಸ್ರಯೇಲರಿಗೆ ಮಾಡಿದ ಉಪನ್ಯಾಸಗಳು ಇವು.


ಅಬ್ರೋನದಿಂದ ಎಚ್ಯೋನ್ ಗೆಬೆರಿನಲ್ಲೂ


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು