Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:1 - ಕನ್ನಡ ಸತ್ಯವೇದವು C.L. Bible (BSI)

1 “ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನೀವು ನಿಮಗಿಂತ ಬಲಿಷ್ಠರಾದ ವೈರಿಗಳ ಮೇಲೆ ಯುದ್ಧಕ್ಕೆ ಹೋದಾಗ ಅವರ ರಥಾಶ್ವಗಳನ್ನು ಮತ್ತು ನಿಮಗಿಂತಲೂ ಹೆಚ್ಚಾದ ಸೈನ್ಯಬಲವನ್ನು ನೋಡಿ ನೀವು ಭಯಗ್ರಸ್ತರಾಗಬೇಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ತಂದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:1
45 ತಿಳಿವುಗಳ ಹೋಲಿಕೆ  

ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ಯೆಹೋಶುವನು ಸರ್ವೇಶ್ವರನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಟ್ಟನು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.


“ಕಾಳಗ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಯೋಧರಿಗೆ, ‘ಇಸ್ರಯೇಲರೇ, ಕೇಳಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿದೆ; ನೀವು ಎದೆಗೆಡಬಾರದು, ದಿಗಿಲುಪಡಬಾರದು, ನಡುಗಬಾರದು, ಶತ್ರುಗಳಿಗೆ ಭಯಪಡಬಾರದು.


ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧಮಾಡುತ್ತೇನೆ,” ಎಂದು ಹೇಳಿದನು.


ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.


“ಅದಕ್ಕೆ ನಾನು, ‘ಕಳವಳಪಡಬೇಡಿ, ಅವರಿಗೆ ಭಯಪಡಬೇಡಿ.


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.


ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು