Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:2 - ಕನ್ನಡ ಸತ್ಯವೇದವು C.L. Bible (BSI)

2-3 “ಕಾಳಗ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಯೋಧರಿಗೆ, ‘ಇಸ್ರಯೇಲರೇ, ಕೇಳಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿದೆ; ನೀವು ಎದೆಗೆಡಬಾರದು, ದಿಗಿಲುಪಡಬಾರದು, ನಡುಗಬಾರದು, ಶತ್ರುಗಳಿಗೆ ಭಯಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನಿಮಗೆ ಕಾಳಗ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರಿಗೆ - ಇಸ್ರಾಯೇಲ್ಯರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗೆಡಬಾರದು, ದಿಗಿಲುಪಡಬಾರದು, ನಡುಗಬಾರದು, ಶತ್ರುಗಳಿಗೆ ಭಯಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀವು ಯುದ್ಧಕ್ಕೆ ಹೊರಟುನಿಂತಾಗ ಯಾಜಕನು ಸೈನಿಕರ ಬಳಿಗೆ ಹೋಗಿ ಹೀಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಯುದ್ಧಕ್ಕೆ ಸಮೀಪ ಬಂದಾಗ, ಯಾಜಕನು ಹತ್ತಿರ ಬಂದು, ಯೋಧರ ಸಂಗಡ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:2
9 ತಿಳಿವುಗಳ ಹೋಲಿಕೆ  

ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.


ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.


ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧಮಾಡುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು