ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.
ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.
ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.