Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:23 - ಕನ್ನಡ ಸತ್ಯವೇದವು C.L. Bible (BSI)

23 ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:23
18 ತಿಳಿವುಗಳ ಹೋಲಿಕೆ  

ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಹೀಗೆ ಅವರ ನಾಡು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ. ಆ ನಾಡು ತನ್ನಲ್ಲಿ ವಾಸಿಸಿದವರನ್ನು ಕಕ್ಕಿಬಿಟ್ಟಿತು.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.


ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಆದುದರಿಂದಲೇ ಇಸ್ರಯೇಲರು ಶತ್ರುಗಳ ಮುಂದೆ ನಿಲ್ಲಲಾರದೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದುದನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ಅದು ಶಾಪಗ್ರಸ್ತವಾದ್ದರಿಂದ ಅಸಹ್ಯಪಟ್ಟು ಅದನ್ನು ಮುಟ್ಟಲೂಕೂಡದು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ಇಸ್ರಯೇಲರು ನಾಡನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು.


“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.


ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.


ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ಸಮಾಚಾರ ಯೇಹುವಿಗೆ ಮುಟ್ಟಿದಾಗ ಅವನು; “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು