Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:4 - ಕನ್ನಡ ಸತ್ಯವೇದವು C.L. Bible (BSI)

4 ಎಂದಿಗೂ ವ್ಯವಸಾಯವಿಲ್ಲದಂಥ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:4
6 ತಿಳಿವುಗಳ ಹೋಲಿಕೆ  

ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟದ ಹಾಗು ಯಾವ ಕೆಲಸವನ್ನೂ ಮಾಡದ ಒಂದು ಕಡಸನ್ನು ತೆಗೆದುಕೊಳ್ಳಬೇಕು;


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಈಗ ನೀವು ಒಂದು ಹೊಸ ಒಡಂಬಡಿಕೆಯನ್ನು ಮಾಡಿಸಿರಿ. ಅದಕ್ಕೆ ಹಾಲುಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ.


ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು