Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:6 - ಕನ್ನಡ ಸತ್ಯವೇದವು C.L. Bible (BSI)

6 ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು, ಆ ತಗ್ಗಿನಲ್ಲಿ ಕುತ್ತಿಗೆ ಮುರಿದ ಆ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ಕೈಗಳನ್ನು ತೊಳೆದುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೊಲೆಯಾದವನ ದೇಹದ ಸಮೀಪವಿರುವ ಪಟ್ಟಣದ ಹಿರಿಯರು ಕುತ್ತಿಗೆ ಮುರಿಯಲ್ಪಟ್ಟ ಹಸುವಿನ ಮೇಲೆ ತಮ್ಮತಮ್ಮ ಕೈಗಳನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:6
12 ತಿಳಿವುಗಳ ಹೋಲಿಕೆ  

ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.


ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ಹಿಮದಿಂದ ನಾನು ಸ್ನಾನಮಾಡಿದರೂ ಚೌಳಿನಿಂದ ನಾನು ಕೈತೊಳೆದರೂ


ಹಾಗೆ ಮಾಡುವಾಗ, ‘ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ; ನಮ್ಮ ಕಣ್ಣುಗಳು ನೋಡಲಿಲ್ಲ;


ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು