Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಆ ರಕ್ತಾಪರಾಧಕ್ಕೆ ಕ್ಷಮೆ ದೊರಕುವುದು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯ ದೋಷವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಆ ರಕ್ತಾಪರಾಧವು ಕ್ಷವಿುಸಲ್ಪಡುವದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡುವದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗೆ ನೀವು ಯೆಹೋವನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ನಿಮ್ಮ ಸಮೂಹದಿಂದ ದೋಷವನ್ನು ತೆಗೆದುಹಾಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಪ್ರಕಾರ ನೀವು ಯೆಹೋವ ದೇವರ ಮುಂದೆ ಸರಿಯಾದದ್ದನ್ನು ಮಾಡಿದರೆ, ರಕ್ತಾಪರಾಧವನ್ನು ನಿಮ್ಮಲ್ಲಿಂದ ತೆಗೆದುಹಾಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:9
5 ತಿಳಿವುಗಳ ಹೋಲಿಕೆ  

ನೀವು ಹೀಗೆ ನಡೆದು, ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಅವರ ಎಲ್ಲ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ, ಅವರು ರೋಷಾಗ್ನಿಯನ್ನು ತಡೆದು, ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸುವರು; ತಾವು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಅಭಿವೃದ್ಧಿಗೊಳಿಸುವರು.


ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು