Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:22 - ಕನ್ನಡ ಸತ್ಯವೇದವು C.L. Bible (BSI)

22 “ಒಬ್ಬನು ಪರನ ಹೆಂಡತಿಯೊಡನೆ ವ್ಯಭಿಚಾರ ಮಾಡಿ ಸಿಕ್ಕಿಬಿದ್ದರೆ ಆ ಸ್ತ್ರೀಪುರುಷ ಇಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಇಂಥ ಕೇಡನ್ನು ಇಸ್ರಯೇಲರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾವನಾದರೂ ಪರನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ಹೊರಬಿದ್ದರೆ ಆ ಸ್ತ್ರೀ ಪುರುಷರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಆ ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಒಬ್ಬ ಮನುಷ್ಯನು ಪರನ ಹೆಂಡತಿಯೊಡನೆ ಮಲಗಿಕೊಂಡವನಾಗಿ ಸಿಕ್ಕಿಬಿದ್ದರೆ, ಆ ಸ್ತ್ರೀಯ ಸಂಗಡ ಮಲಗಿಕೊಂಡ ಮನುಷ್ಯನೂ ಆ ಸ್ತ್ರೀಯೂ ಇಬ್ಬರೂ ಸಾಯಬೇಕು. ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:22
11 ತಿಳಿವುಗಳ ಹೋಲಿಕೆ  

“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.


“ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಮುಂದೆ, ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು.


ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು