ಧರ್ಮೋಪದೇಶಕಾಂಡ 22:24 - ಕನ್ನಡ ಸತ್ಯವೇದವು C.L. Bible (BSI)24 ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.