Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:4 - ಕನ್ನಡ ಸತ್ಯವೇದವು C.L. Bible (BSI)

4 “ಸ್ವದೇಶದವನ ಕತ್ತೆಯಾಗಲಿ, ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ, ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸ್ವದೇಶದವನ ಕತ್ತೆಯಾಗಲಿ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಿಮ್ಮ ನೆರೆಯವನ ಕತ್ತೆಯಾಗಲಿ ಹಸುವಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೋಡಿದರೂ ನೋಡದಂತೆ ಹೋಗದೆ ಅದಕ್ಕೆ ಏಳಲು ಸಹಾಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಸಹೋದರನ ಕತ್ತೆಯಾಗಲಿ, ಎತ್ತಾಗಲಿ, ಮಾರ್ಗದಲ್ಲಿ ಬಿದ್ದಿರುವುದನ್ನು ನೋಡಿದರೆ ಅಲಕ್ಷ್ಯ ಮಾಡಬೇಡ. ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:4
10 ತಿಳಿವುಗಳ ಹೋಲಿಕೆ  

ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವೇ ಆಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ಕಾಣದವರಂತೆ ಇರಲೇಬಾರದು.


“ಹೆಂಗಸರು ಗಂಡಸರಂತೆ, ಗಂಡಸರು ಹೆಂಗಸರಂತೆ ಬಟ್ಟೆ ಹಾಕಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು