Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:11 - ಕನ್ನಡ ಸತ್ಯವೇದವು C.L. Bible (BSI)

11 ಅವನು ಸಂಜೆವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಸಂಜೇವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಣುಗಿದ ಮೇಲೆ ಪಾಳೆಯದೊಳಗೆ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಾಯಂಕಾಲವಾದಾಗ ಅವನು ಸ್ನಾನಮಾಡಿ ಸೂರ್ಯ ಮುಳುಗಿದ ಬಳಿಕ ಪಾಳೆಯದೊಳಕ್ಕೆ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಂಜೆ ಆಗುತ್ತಿರುವಾಗ ಅವನು ಸ್ನಾನಮಾಡಿ, ಸೂರ್ಯನು ಮುಳುಗಿದಾಗ ಪಾಳೆಯದ ಒಳಗೆ ತಿರುಗಿಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:11
20 ತಿಳಿವುಗಳ ಹೋಲಿಕೆ  

ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರ ಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನ ಮಾಡಬೇಕು. ಆಗಿನಿಂದ ಶುದ್ಧನಾಗುವನು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.


ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧ ಮಾಡಿಸಿಕೊಳ್ಳುವುದಕ್ಕೆ ಆಗಿನಿಂದ ಏಳು ದಿನಗಳನ್ನು ಎಣಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಒರತೆ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.


ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.


“ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗಸ್ನಾನ ಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರು ಅಶುದ್ಧನಾದರೆ ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.


“ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು