Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:4 - ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ನೀವು ಐಗುಪ್ತದೇಶದಿಂದ ಬಂದಾಗ [ಅಮ್ಮೋನಿಯರು] ಅನ್ನ ಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; [ಮೋವಾಬ್ಯರು] ನಿಮ್ಮನ್ನು ಶಪಿಸುವದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣ ಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾವಿುನ ಪೆತೋರೂರಿನಿಂದ ಅವನನ್ನು ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:4
19 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಇಸ್ರಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರೆಸಿದ್ದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದರು ಎಂಬ ಮಾತು ಬರೆದಿರುವುದಾಗಿ ಗೊತ್ತಾಯಿತು.


ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಉಣ್ಣೆ ಕತ್ತರಿಸುವವರಿಗಾಗಿ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಡಲಾಗದು,” ಎಂದು ಉತ್ತರಕೊಟ್ಟನು.


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಆಮೇಲೆ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಯೇಲರಾದ ನಿಮ್ಮ ವಿರುದ್ಧ ಯುದ್ಧಮಾಡಲು ಎದ್ದ. ನಿಮ್ಮನ್ನು ಶಪಿಸಲು ಬೆಯೋರನ ಮಗ ಬಿಳಾಮನಿಗೆ ಕರೆ ಕಳುಹಿಸಿದ.


ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?


ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು