Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:7 - ಕನ್ನಡ ಸತ್ಯವೇದವು C.L. Bible (BSI)

7 “ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ಬಂಧುಜನಗಳು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:7
19 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ.


“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?


ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.


“ಪರದೇಶೀಯರನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದಿರಲ್ಲವೆ? ಅಂಥವರ ಮನೋವ್ಯಥೆ ನಿಮಗೆ ಗೊತ್ತೇ ಇದೆ.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.


‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)


“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;


ಬಂದನು ಆಗ ಇಸ್ರಯೇಲನು ಈಜಿಪ್ಟಿಗೆ I ಪ್ರವಾಸಿಯಾದ ಯಕೋಬನು ಹಾಮ ನಾಡಿಗೆ II


ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.


ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು.


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಯೇಲರಿಗೆ ಮಹಾಬಾಧಕನಾದ ಹದದನ ಜೊತೆಗೆ ಇವನೂ ವೈರಿಯಾಗಿದ್ದನು. ಇವನು ಸಿರಿಯಾ ದೇಶದಲ್ಲಿ ಅರಸನಾಗಿ ಇಸ್ರಯೇಲರನ್ನು ಬಹಳವಾಗಿ ದ್ವೇಷಿಸಿದನು.


ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು