Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:8 - ಕನ್ನಡ ಸತ್ಯವೇದವು C.L. Bible (BSI)

8 ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವಾರಾಧನೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:8
15 ತಿಳಿವುಗಳ ಹೋಲಿಕೆ  

“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುಚಿಯೂ ಆಗದಂತೆ ಎಚ್ಚರಿಕೆಯಿಂದಿರಬೇಕು.


ಮೊದಲು ಹುಟ್ಟಿದ ಮಗು ಕೆಂಚಗೂ ಮೈಯೆಲ್ಲ ರೋಮಮಯವಾಗೂ ಇತ್ತು. ಎಂತಲೇ ಅದಕ್ಕೆ ಏಸಾವ ಎಂದು ಹೆಸರಿಟ್ಟರು.


ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು.


“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.


ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.


ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ.


ಅವನ ಜನರು ಅಡವಿಯಲ್ಲಿ ಒಬ್ಬ ಈಜಿಪ್ಟಿನವನು ಬಿದ್ದಿರುವುದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿದರು.


ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.


ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


“ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು