Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:9 - ಕನ್ನಡ ಸತ್ಯವೇದವು C.L. Bible (BSI)

9 “ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುಚಿಯೂ ಆಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುಚಿಯೂ ಆಗದಂತೆ ಎಚ್ಚರದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿಮ್ಮ ಸೈನ್ಯವು ವೈರಿಗಳೊಂದಿಗೆ ಯುದ್ಧಮಾಡಲು ಹೋದಾಗ ನಿಮ್ಮನ್ನು ಅಶುದ್ಧಪಡಿಸುವ ಪ್ರತಿಯೊಂದರಿಂದಲೂ ನೀವು ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಶತ್ರುಗಳಿಗೆ ವಿರೋಧವಾಗಿ ಸೈನ್ಯವಾಗಿ ಹೊರಟರೆ, ಪಾಳೆಯದಲ್ಲಿ ಯಾವ ಅಶುದ್ಧ ಕಾರ್ಯಗಳು ಇಲ್ಲದಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:9
11 ತಿಳಿವುಗಳ ಹೋಲಿಕೆ  

ನೀವಾದರೋ ಸರ್ವೇಶ್ವರನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ ಇಸ್ರಯೇಲರ ಪಾಳೆಯವೇ ಶಾಪಕ್ಕೆ ಗುರಿಯಾಗಿ ನಾಶವಾದೀತು.


ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸವಾಗಿದ್ದು, ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಯಿಮ್ ಪರ್ವತದವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಜರ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಸಿದನು.


ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.


ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.


ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರು ಅಶುದ್ಧನಾದರೆ ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.


ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು