Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:15 - ಕನ್ನಡ ಸತ್ಯವೇದವು C.L. Bible (BSI)

15 ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:15
22 ತಿಳಿವುಗಳ ಹೋಲಿಕೆ  

ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


“ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.


ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ. ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.


ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.


ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.


“ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II


ಎತ್ತಿರುವೆ ಪ್ರಭೂ, ಹೃನ್ಮನಗಳನು ನಿನ್ನತ್ತ I ಇಟ್ಟಿರುವೆ ಭರವಸೆ ನಿನ್ನಲೆ ದೇವಾ ಸನ್ನುತ II


ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ನನ್ನ ಭೂಮಿ ನನಗೆ ವಿರುದ್ಧ ಪ್ರತಿಭಟಿಸಿದ್ದರೆ ನೇಗಿಲ ಗೆರೆಗಳೆಲ್ಲ ನನ್ನನು ದೂರಿ ರೋದಿಸಿದ್ದರೆ,


‘ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ’ ಎಂದೂ, ‘ಕಾರ್ಮಿಕನು ಕೂಲಿಗೆ ಅರ್ಹನು’ ಎಂದೂ ಧರ್ಮಶಾಸ್ತ್ರ ಹೇಳುತ್ತದೆಯಲ್ಲವೇ?


“ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.


ನನ್ನ ದಾಸದಾಸಿಯರು ನನ್ನ ಮೇಲೆ ತಪ್ಪುಹೊರಿಸಿದ್ದರೆ ನಾನು ಆ ತಪ್ಪನು ಅಸಡ್ಡೆ ಮಾಡಿದವನಾಗಿದ್ದರೆ,


ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು