Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:16 - ಕನ್ನಡ ಸತ್ಯವೇದವು C.L. Bible (BSI)

16 “ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:16
8 ತಿಳಿವುಗಳ ಹೋಲಿಕೆ  

ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ಆ ಪಂಗಡದವರೆಲ್ಲರು ಸತ್ತರು. ಆದರೆ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು