Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:21 - ಕನ್ನಡ ಸತ್ಯವೇದವು C.L. Bible (BSI)

21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದ್ರಾಕ್ಷೆಯ ತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ದ್ರಾಕ್ಷಿಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು. ಪರದೇಶಿ, ತಂದೆತಾಯಿ ಇಲ್ಲದ ವ್ಯಕ್ತಿ, ವಿಧವೆ ಇಂಥವರಿಗಾಗಿ ಅದನ್ನು ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:21
5 ತಿಳಿವುಗಳ ಹೋಲಿಕೆ  

“ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.


ಎಣ್ಣೆಯಮರಗಳ ರೆಂಬೆಗಳಿಂದ ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳನ್ನು ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅವುಗಳನ್ನು ಬಿಟ್ಟುಬಿಡಿ.


ನೀವೆ ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸುತ್ತಿದ್ದೇನೆ.


ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು