Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:4 - ಕನ್ನಡ ಸತ್ಯವೇದವು C.L. Bible (BSI)

4 ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದವಳು; ಅವಳನ್ನು ಪುನಃ ಪರಿಗ್ರಹಿಸುವುದು ಸರ್ವೇಶ್ವರನಿಗೆ ಹೇಯಕಾರ್ಯ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿಗೆ ದೋಷವುಂಟಾಗಲು ಅವಕಾಶಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಪರಿಗ್ರಹಿಸುವದು ಯೆಹೋವನಿಗೆ ಹೇಯಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಹೆಂಡತಿಯಾಗಿ ಸ್ವೀಕರಿಸಬಾರದು. ಅದು ಯೆಹೋವ ದೇವರ ಮುಂದೆ ಅಸಹ್ಯವೇ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ದೋಷವುಂಟಾಗಲು ಅವಕಾಶ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:4
6 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.


ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು