Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:5 - ಕನ್ನಡ ಸತ್ಯವೇದವು C.L. Bible (BSI)

5 “ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನು ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದವರೆಗೆ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು, ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇವಿುಸಬಾರದು; ಅವನು ಒಂದು ವರುಷದವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಒಬ್ಬನು ಹೊಸದಾಗಿ ಮದುವೆಯಾಗಿದ್ದಲ್ಲಿ ಅವನನ್ನು ಸೈನ್ಯಕ್ಕೆ ಕಳುಹಿಸಬಾರದು; ವಿಶೇಷವಾದ ಜವಾಬ್ದಾರಿಯನ್ನು ಅವನಿಗೆ ಕೊಡಬಾರದು. ಒಂದು ವರ್ಷ ಅವನು ಮನೆಯಲ್ಲಿದ್ದುಕೊಂಡು ತನ್ನ ಹೆಂಡತಿಯನ್ನು ಸಂತೋಷಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:5
12 ತಿಳಿವುಗಳ ಹೋಲಿಕೆ  

ನಿನ್ನ ಬುಗ್ಗೆ ದೇವರಿಂದ ಆಶೀರ್ವಾದಹೊಂದಲಿ, ನಿನ್ನ ಆನಂದ ನಿನ್ನ ಯೌವನಕಾಲದ ಹೆಂಡತಿಯಲ್ಲಿರಲಿ.


ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನು ಸೇರಿಸಿಕೊಳ್ಳದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು,’ ಎಂದು ಹೇಳಬೇಕು.


ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.


ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.


ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.


ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಬೇಕು,’ ಎಂದ. ಮತ್ತೊಬ್ಬ, ‘ನನಗೆ ಈಗ ತಾನೆ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ,’ ಎಂದನು.


“ಬೀಸುವ ಕಲ್ಲನ್ನು ಪೂರ್ತಿಯಾಗಲಿ, ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು