Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:16 - ಕನ್ನಡ ಸತ್ಯವೇದವು C.L. Bible (BSI)

16 ನ್ಯಾಯ ವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಹೇಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೋಸವುಳ್ಳ ತೂಕದ ಕಲ್ಲುಗಳನ್ನು ಉಪಯೋಗಿಸುವವರನ್ನು ದೇವರಾದ ಯೆಹೋವನು ದ್ವೇಷಿಸುತ್ತಾನೆ. ಹೌದು, ಆತನು ಮೋಸ ಮಾಡುವವರನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಂಥ ಅನ್ಯಾಯ ಮಾಡುವವರೆಲ್ಲರೂ ನಿನ್ನ ದೇವರಾದ ಯೆಹೋವ ದೇವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:16
10 ತಿಳಿವುಗಳ ಹೋಲಿಕೆ  

ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


“ಹೆಂಗಸರು ಗಂಡಸರಂತೆ, ಗಂಡಸರು ಹೆಂಗಸರಂತೆ ಬಟ್ಟೆ ಹಾಕಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯರು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಇಂಥ ಕೆಲಸಗಳನ್ನು ನಡೆಸುವವರು ಸರ್ವೇಶ್ವರನಿಗೆ ಅಸಹ್ಯರಾಗಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ದೂರ ಹೊರದೂಡಿಸಿಬಿಡುತ್ತಾರೆ.


ತಾರತಮ್ಯದ ತೂಕದ ಕಲ್ಲು ಸರ್ವೇಶ್ವರನಿಗೆ ಅಸಹ್ಯ; ಮೋಸದ ತಕ್ಕಡಿಯನ್ನು ಬಳಸುವುದು ಸರಿಯಲ್ಲ.


“ನೀವು ಈಜಿಪ್ಟ್ ದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿ.


“ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು