ಧರ್ಮೋಪದೇಶಕಾಂಡ 25:19 - ಕನ್ನಡ ಸತ್ಯವೇದವು C.L. Bible (BSI)19 ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು. ಅಧ್ಯಾಯವನ್ನು ನೋಡಿ |