Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:2 - ಕನ್ನಡ ಸತ್ಯವೇದವು C.L. Bible (BSI)

2 ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿ ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನ್ಯಾಯಾಧೀಶರು ಒಬ್ಬನಿಗೆ ಕೊರಡೆ ಏಟು ಕೊಡಬೇಕೆಂದು ತೀರ್ಮಾನಿಸಿದರೆ ಅವನು ಆ ಶಿಕ್ಷೆ ಹೊಂದುವವನನ್ನು ಬೋರಲು ಮಲಗಿಸಿ ನ್ಯಾಯಾಧೀಶನ ಕಣ್ಣು ಮುಂದೆ ಅವನಿಗೆ ಕೊರಡೆ ಏಟು ಹೊಡಿಸಬೇಕು. ಅವನ ಅಪರಾಧಕ್ಕನುಸಾರವಾಗಿ ಕೊರಡೆ ಏಟುಗಳ ಸಂಖ್ಯೆಯು ಏರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಪರಾಧಿಗೆ ಪೆಟ್ಟಿನ ಶಿಕ್ಷೆ ತಿರ್ಮಾನವಾದರೆ, ನ್ಯಾಯಾಧಿಪತಿ ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:2
10 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


ಬಳಿಕ ಪಿಲಾತನು ಅವರ ಇಷ್ಟದಂತೆಯೇ ಬರಬ್ಬನನ್ನು ಬಿಟ್ಟುಕೊಟ್ಟನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೇರಿಸಲು ಒಪ್ಪಿಸಿಬಿಟ್ಟನು.


ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.


ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.


ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು