Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:9 - ಕನ್ನಡ ಸತ್ಯವೇದವು C.L. Bible (BSI)

9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು ಅವನ ಮುಖದ ಮೇಲೆ ಉಗುಳಿ - ಅಣ್ಣನಿಗೋಸ್ಕರ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು, ಕೆರವನ್ನು ಅವನ ಪಾದದಿಂದ ಬಿಡಿಸಿ, ಅವನ ಮುಖದಲ್ಲಿ ಉಗುಳಿ ಉತ್ತರಕೊಟ್ಟು, “ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು,” ಎಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:9
16 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.


ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.


ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.


ಆತನು, “ನನ್ನಾನಂತರ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ; ಬಗ್ಗಿ ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ.


ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯಮೇಲೆ ಹೊಡೆದರು.


ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ನನಗೆ ಅಸಹ್ಯಪಟ್ಟು ದೂರಸರಿಯುತ್ತಾರೆ ನನ್ನ ಮೇಲೆ ಉಗುಳುವುದಕ್ಕೂ ಹಿಂಜರಿಯದಿದ್ದಾರೆ.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, ‘ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ಹೇಳುವ ಪಕ್ಷಕ್ಕೆ


ಆ ಮನುಷ್ಯನ ಮನೆಯವರಿಗೆ, ‘ಕೆರಬಿಚ್ಚಿಸಿಕೊಂಡವನ ಮನೆಯವರು’ ಎಂಬ ಹೆಸರು ಬರುವುದು.


ಅದಕ್ಕೆ ಆ ವ್ಯಕ್ತಿ, “ಹಾಗಾದರೆ ಹೊಲವನ್ನು ಕೊಂಡುಕೊಳ್ಳುವ ಹಕ್ಕನ್ನು ನಾನು ಬಿಟ್ಟುಕೊಡುತ್ತೇನೆ. ಇಲ್ಲದಿದ್ದರೆ ನನ್ನ ಕುಟುಂಬಕ್ಕೆ ಸೇರಿರುವ ಆಸ್ತಿಗೆ ನಷ್ಟವಾಗುತ್ತದೆ. ಆದ್ದರಿಂದ ಆ ಹಕ್ಕನ್ನು ನೀನೇ ವಹಿಸಿಕೋ, ನನ್ನಿಂದಾಗದು,” ಎಂದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು