Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:1 - ಕನ್ನಡ ಸತ್ಯವೇದವು C.L. Bible (BSI)

1 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲು ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಬೇಗನೆ ಪ್ರವೇಶಿಸಲಿದ್ದೀರಿ. ಆ ದೇಶವನ್ನು ಸ್ವಾಧೀನಮಾಡಿಕೊಂಡು ಅಲ್ಲಿ ನೆಲೆಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:1
14 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ, ನಿಮಗೆ ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿರುವಾಗ ‘ಸುತ್ತಲಿರುವ ಎಲ್ಲ ಜನಾಂಗಗಳಂತೆ ನಾವೂ ಒಬ್ಬ ಅರಸನನ್ನು ನೇಮಿಸಿಕೊಳ್ಳೋಣ’ ಎಂದು ಹೇಳಿಕೊಳ್ಳಬಹುದು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.


ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲೆಸೆಯಬೇಕು; ತರುವಾಯ ಜನರೆಲ್ಲರೂ ಎಸೆಯಲಿ.


“ನಿಮ್ಮ ಮಧ್ಯೆ ಯಾವ ಪ್ರವಾದಿಯೆ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆಮಾಡಿ


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ನೀನು ಇಲ್ಲೇ ನನ್ನ ಬಳಿ ಇರು; ಅವರಿಗೆ ಬೋಧಿಸಬೇಕಾದ ಎಲ್ಲ ಆಜ್ಞೆಗಳನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ನಾಡಿನಲ್ಲಿ ಅವರು ಅವುಗಳನ್ನು ಅನುಸರಿಸಬೇಕು,’ ಎಂದು ಹೇಳಿದರು.


“ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು: ‘ನಾನು ನಿಮ್ಮನ್ನು ಕರೆದುಕೊಂಡು ಹೋಗುವ ನಾಡಿಗೆ ನೀವು ಸೇರಿದ ನಂತರ


“ನೀನು ಇಸ್ರಯೇಲರಿಗೆ ಹೀಗೆಂದು ಹೇಳು: ‘ನಿಮ್ಮ ನಿವಾಸಕ್ಕಾಗಿ ನಾನು ಕೊಡುವ ನಾಡಿಗೆ ನೀವು ಬಂದು ಸೇರಿದ ನಂತರ


ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.


ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಯನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ನಾಡನ್ನು ಮೂರು ಭಾಗಮಾಡಬೇಕು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು