Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:10 - ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಸರ್ವೇಶ್ವರಾ, ನೀವು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು’ ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿಟ್ಟು ಅವರನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂವಿುಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’ “ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಇಟ್ಟು ಆತನನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:10
21 ತಿಳಿವುಗಳ ಹೋಲಿಕೆ  

ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ನಮಗೆ ಸರ್ವೇಶ್ವರನೇ ದೇವರಾಗಿರುವರೆಂದು ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಅವರ ಮಾತಿಗೆ ಲಕ್ಷ್ಯಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.


“ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮುಂದೆ ಇಡುವನು.


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.


“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು