Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ‘ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯನಿಗೆ, ಪರದೇಶಿಗೆ, ತಾಯಿತಂದೆ ಇಲ್ಲದ ವ್ಯಕ್ತಿಗೆ, ವಿಧವೆಗೆ ಇಂಥವರಿಗೆ ಕೊಟ್ಟು ಇದ್ದೇವೆ, ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯ, ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೆ ಕೊಟ್ಟಿದ್ದೇವೆ; ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲೂ ಇಲ್ಲ ಮರೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ದೇವರಾದ ಯೆಹೋವನಿಗೆ ನೀನು ಹೀಗೆ ಹೇಳಬೇಕು: ‘ನನ್ನ ಮನೆಯೊಳಗಿಂದ ನನ್ನ ಬೆಳೆಯ ಪರಿಶುದ್ಧ ಭಾಗವನ್ನು ತೆಗೆದು ಲೇವಿಯರಿಗೆ, ಪರದೇಶಸ್ಥರಿಗೆ, ಅನಾಥರಿಗೆ, ವಿಧವೆಯರಿಗೆ ಕೊಟ್ಟಿರುತ್ತೇನೆ. ನಿನ್ನ ಕಟ್ಟಳೆಗಳನ್ನೆಲ್ಲಾ ಅನುಸರಿಸಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನಿರಾಕರಿಸಲಿಲ್ಲ, ನಾನು ಅವುಗಳನ್ನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, “ನಾವು ಮೀಸಲಿಟ್ಟ ಪರಿಶುದ್ಧ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದು, ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರಿಗೆ, ಪರದೇಶಿಗೆ, ತಂದೆತಾಯಿ ಇಲ್ಲದವರಿಗೆ, ವಿಧವೆಯರಿಗೆ ಕೊಟ್ಟಿದ್ದೇವೆ. ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:13
19 ತಿಳಿವುಗಳ ಹೋಲಿಕೆ  

ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II


ನಾನಲ್ಪನು, ತಿರಸ್ಕಾರ ಹೊಂದಿದವನು I ಆದರೂ ಮರೆತಿಲ್ಲ ನಿನ್ನ ನೇಮಗಳನು II


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II


ಮರೆಯೆ ನಾನೆಂದಿಗೂ ನಿನ್ನ ನಿಯಮಗಳನು I ಅವುಗಳಿಂದಲೇ ನನಗಿತ್ತೆ ನವಜೀವನವನು II


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


“ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ನಾವು ಸತ್ತವರಿಗಾಗಿ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದು ಹಾಕಲಿಲ್ಲ; ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಟ್ಟು ನೀವು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು