Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:16 - ಕನ್ನಡ ಸತ್ಯವೇದವು C.L. Bible (BSI)

16 “ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಈ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅನುಸರಿಸಲು ನಿಮ್ಮ ದೇವರಾದ ಯೆಹೋವನು ಇಂದು ನಿಮಗೆ ಆಜ್ಞಾಪಿಸುತ್ತಾನೆ. ನಿಮ್ಮ ಪೂರ್ಣಹೃದಯದಿಂದಲೂ ಆತ್ಮದಿಂದಲೂ ಅವುಗಳನ್ನು ಎಚ್ಚರಿಕೆಯಿಂದ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:16
17 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


“ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ನಾಡಿನಲ್ಲೆ ನೀವು ಜೀವಮಾನ ಪರಿಯಂತರ ಅನುಸರಿಸಬೇಕಾದ ಆಜ್ಞಾವಿಧಿಗಳು ಇವು:


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ನೇಮಿಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


ನಮಗೆ ಸರ್ವೇಶ್ವರನೇ ದೇವರಾಗಿರುವರೆಂದು ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಅವರ ಮಾತಿಗೆ ಲಕ್ಷ್ಯಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು