Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:18 - ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ, ‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನೋ ನಿಮ್ಮ ವಿಷಯದಲ್ಲಿ - ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:18
20 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


ಆದುದರಿಂದ ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕು,” ಎಂದು ಹೇಳಿದನು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು