Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:19 - ಕನ್ನಡ ಸತ್ಯವೇದವು C.L. Bible (BSI)

19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರೆಂದೂ ಒಡಂಬಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:19
21 ತಿಳಿವುಗಳ ಹೋಲಿಕೆ  

ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ಹೋಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು; ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.


ಮೋಶೆ ಇಸ್ರಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.


ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು