Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:3 - ಕನ್ನಡ ಸತ್ಯವೇದವು C.L. Bible (BSI)

3 ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, ‘ಸರ್ವೇಶ್ವರ ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಾನು ಸೇರಿದ್ದಾಯಿತೆಂದು ನಾವು ಸೇವೆಮಾಡುವ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಈಗ ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, “ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ - ಯೆಹೋವನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈಗ ಒಪ್ಪಿಕೊಂಡಿದ್ದೇವೆ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲಿ ಸೇವೆ ಮಾಡುತ್ತಿರುವ ಯಾಜಕನಿಗೆ, ‘ಯೆಹೋವನು ನನ್ನ ಪೂರ್ವಿಕರಿಗೆ ಒಂದು ದೇಶವನ್ನು ಕೊಡುವುದಾಗಿ ವಾಗ್ದಾನ ಮಾಡಿದನು. ನಾನು ಆ ದೇಶಕ್ಕೆ ಬಂದಿರುತ್ತೇನೆ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ, “ಯೆಹೋವ ದೇವರು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನಾನು ಸೇರಿದ್ದಾಯಿತೆಂದು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಈಗ ನಾನು ಒಪ್ಪಿಕೊಳ್ಳುತ್ತೇನೆ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:3
13 ತಿಳಿವುಗಳ ಹೋಲಿಕೆ  

ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠಯಾಜಕ ನಮಗಿದ್ದಾರೆ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


“ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮುಂದೆ ಇಡುವನು.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು